ದೊಡ್ಡ ಸುದ್ದಿ ಹೊಸ ಸುದ್ದಿ

ರಾಜ್ಯಸಭೆಯಲ್ಲಿ ಮೊಳಗಿದ ಫ್ರೀಡಂ ಕಿಣಕಿಣ

ಅತಿ ಕಡಿಮೆ ಬೆಲೆಗೆ ಮೊಬೈಲ್ ನೀಡುತ್ತಿರುವ ಕುರಿತು ಹಲವು ಅನುಮಾನಗಳು ಮೂಡಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಸಂಸದ ಪ್ರಮೋದ್‌ ತಿವಾರಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದು ಸಹಸ್ರಮಾನದ ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕೇಂದ್ರ ಟೆಲಿಕಾಂ ಸಚಿವಾಲಯ ಇದಕ್ಕೆ ಸಂಬಂಧಿಸಿದಂತೆ ಗ್ರಾಹಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಜತೆಗೆ ಸುಮಾರು 2300 ರಿಂದ 2400 ರೂಪಾಯಿ ಬೆಲೆಬಾಳುವ ಮೊಬೈಲ್‌ ಕೇವಲ 250 ರೂಪಾಯಿಗೆ ಮಾರಾಟ ಮಾಡುತ್ತಿರುವುದರ ಹಿಂದಿನ ಅಸಲಿಯತ್ತೇನು ಎಂದು ಅವರು ಪ್ರಶ್ನಿಸಿದ್ದಾರೆ.