ಫ್ಯಾಸನ್ ಡಿಸೈನರ್ ಜತೆ ಫೇಸ್‌ಬುಕ್ ಮೂಲಕ ಸಂಪರ್ಕ ಬೆಳೆಸಿದ ಅಮಿತ್ ಶರ್ಮಾ ಆಕೆಯ ಜತೆ ಪ್ರೀತಿಯ ನಾಟಕವಾಡಿದ್ದಾನೆ. ಆರಂಭದಲ್ಲಿ ಆಕೆಯೊಂದಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಸುಮಾರು ಎರಡು ತಿಂಗಳಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ ಶರ್ಮಾ ನಂತರ ಆಕೆಯೊಂದಿಗೆ ಮದುವೆಯಾಗಲು ನಿರಾಕರಿಸಿದ್ದಾನೆ.
ಕಳೆದ ಎರಡು ದಿನಗಳ ಹಿಂದೆ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಲು ಆತ ಮುಂದಾದಾಗ ಯುವತಿ ನಿರಾಕರಿಸಿದ್ದಾಳೆ. ಇದರಿಂದ ಆಕೆಯ ಹುಟ್ಟುಹಬ್ಬದ ದಿನ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಅಮಿತ್ ಶರ್ಮಾ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.