ದೊಡ್ಡ ಸುದ್ದಿ ಸಿಟಿ ಸುದ್ದಿ

ಕರಾವಳಿಯಲ್ಲಿ ಸಂಪೂರ್ಣ ರಜೆ ಸಾರಿದ ಡಿಸಿ

ಮಂಗಳೂರು: ಮತದಾನ ನಡೆಯಲಿರುವ ಜಿಲ್ಲಾ , ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಹಿನ್ನೆ ಲೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಕೇಂದ್ರ ಸರಕಾರಿ ಕಚೇರಿ, ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳು, ಜೀವ ವಿಮಾ ನಿಗಮ ಕಚೇರಿಗಳಿಗೆ ಫೆ.೨೦ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಆದರೆ ನಗರ ಪ್ರದೇಶಗಳಲ್ಲಿ ಕರ್ತವ್ಯದಲ್ಲಿರುವ ಮತ್ತು ಕೆಲಸ ಮಾಡುತ್ತಿರುವ ಸಿಬ್ಬಂದಿಗಳು, ನೌಕರರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಅಂತಹವರಿಗೂ ಅರ್ಧ ದಿನ ರಜೆ ನೀಡುವಂತೆ ಜಿಲ್ಲೆಯ ಎಲ್ಲ ಕಚೇರಿಗಳ ಮುಖ್ಯಸ್ಥರಿಗೆ, ಕಾರ್ಖಾನೆಗಳ ಮಾಲೀಕರಿಗೆ ಹಾಗೂ ಬ್ಯಾಂಕ್‌ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಎ.ಬಿ. ಇಬ್ರಾಹಿಂ ಆದೇಶಿಸಿದ್ದಾರೆ.
ಕಾರ್ಮಿಕರಿಗೆ ರಜೆಗೆ ಆದೇಶ: ದ.ಕ ಚುನಾವಣೆಗಾಗಿ ಮತ ದಾನದ ದಿನದಂದು ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು , ಕೈಗಾರಿಕಾ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತ ಚಲಾಯಿಸಲು ಸಾಧ್ಯವಾಗುವಂತೆ ರಜೆ / ಅನುವು ಮಾಡಿಕೊಡಲು ಮಾಲೀಕರು/ ನಿಯೋಜಕರಿಗೆ ಸೂಚಿಸಿ ಕಾರ್ಮಿಕ ಆಯುಕ್ತರು ಆದೇಶಿಸಿದ್ದಾರೆ. ಚುನಾವಣಾ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಂಸ್ಥೆಗಳಲ್ಲಿನ ಕಾರ್ಮಿಕರಿಗೆ ರಜೆ/ ಅನುವು ಮಾಡಿಕೊಡುವಂತೆ ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.