ಪೊಲೀಸ್ ನಿರ್ದೇಶಕನಾಗಿ ಆತ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಆತನ ಮೇಲೆ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಜತೆಗೆ ಅವರ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ರಾಷ್ಟ್ರೀಯ ಪೊಲೀಸ್ ನಿರ್ದೇಶಕ ಹುದ್ದೆಯಿಂದ ತನ್ನನ್ನು ವಜಾಗೊಳಿಸಲಾಗಿದೆ. ಆದರೆ ನಾನು ಯಾವುದೇ ರೀತಿಯ ಸೆಕ್ಸ್ ದಂಧೆಯಲ್ಲಿ ಭಾಗಿಯಾಗಿಲ್ಲ. ನಾನೋರ್ವ ಮುಗ್ಧ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದು, ಐಜಿ ಕಾರ್ಯಾಲಯದ ವಿಸ್ತೃತ ತನಿಖೆ ನಡೆಸುವಂತೆ ಕೊರಿರುವುದಾಗಿ ಹೇಳಿದ್ದಾರೆ.
ಅಟಾರ್ನಿ ಜನರಲ್ ಕಚೇರಿಯ ತನಿಖೆ ನಡೆಸುತ್ತಿದ್ದು, ಇಲ್ಲಿಯವರೆಗೆ ಯಾವುದೇ ರೀತಿಯ ಪುರಾವೆಗಳು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.