Not Found


HTTP Error 404. The requested resource is not found.

ಸಂಪೂರ್ಣ ಚುನಾವಣೆಯನ್ನು ಬಹಿಷ್ಕಾರ ಮಾಡಿದ ಗ್ರಾಮಸ್ಥರು | Deccan Time
ದೊಡ್ಡ ಸುದ್ದಿ ಸಿಟಿ ಸುದ್ದಿ

ಸಂಪೂರ್ಣ ಚುನಾವಣೆಯನ್ನು ಬಹಿಷ್ಕಾರ ಮಾಡಿದ ಗ್ರಾಮಸ್ಥರು

ರಸ್ತೆ, ವಿದ್ಯುತ್, ಮೊಬೈಲ್ ನೆಟ್‌ವರ್ಕ್ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ತಾಲೂಕಿನ ಪಶ್ಚಿಮಘಟ್ಟದ ತಪ್ಪಲು ಪ್ರದೇಶ ಅಮಾಸೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ಯಾಮಿಹಕ್ಲು ಗ್ರಾಮಸ್ಥರು .

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯ ಮತದಾನ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದಾರೆ. ಬೆಳಗ್ಗಿನಿಂದ ಸಂಜೆಯ ತನಕ ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖಾಧಿಕಾರಿಗಳು, ಅರಣ್ಯ ಇಲಾಖಾಧಿಕಾರಿಗಳು ಸೇರಿದಂತೆ ವಿವಿಧ ಪಕ್ಷದ ರಾಜಕೀಯ ಪಕ್ಷದ ಮುಖಂಡರು ಆಗಮಿಸಿ ಮತದಾನ ಮಾಡುವಂತೆ ಮನವೊಲಿಕೆ ಮಾಡಿದರೂ ಜಗ್ಗದ ಗ್ರಾಮಸ್ಥರು ಮತದಾನವನ್ನು ಸಂಪೂರ್ಣವಾಗಿ ಬಹಿಷ್ಕರಿಸಿದ್ದಾರೆ.