ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಮತದಾನಕ್ಕೆ 48 ಗಂಟೆ ಮುನ್ನ ಬಹಿರಂಗ ಮತಯಾಚನೆಗೆ ಅವಕಾಶ ಇಲ್ಲದ ಸಂದರ್ಭದಲ್ಲಿ ಅಭ್ಯರ್ಥಿ ಪರ ಮತಯಾಚಿಸಿದ ಆರೋಪ ಶಿವಣ್ಣ ಮೇಲಿದೆ. ಶಿವಮೊಗ್ಗದ ನವುಲೆ ಬಳಿ ಶಿವಣ್ಣ, ಗೀತಾ ಶಿವರಾಜ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಮನೆ ಮನೆ ಪ್ರಚಾರ ಮಾಡಿದ್ದರು. ಆ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.