ಕರ್ನಾಟಕ ಆ್ಯಂಟಿಬಯಾಟಿಕ್ಸ್ ಆ್ಯಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) ಪ್ರೊಫೆಶನಲ್ ಸೇಲ್ಸ್ ರೆಪ್ರೆಸೆಂಟೀಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ಏರ್ಪಡಿಸಿದೆ. ಒಟ್ಟು 46 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಫಾರ್ಮಸಿ/ ಸೆನ್ಸ್, ಕಾರ್ಮರ್ಸ್ ಅಥವಾ ಆರ್ಟ್ಸ್ನಲ್ಲಿ ಪದವಿ ಪಡೆದಿದ್ದು, ಈ ಕ್ಷೇತ್ರದಲ್ಲಿ ಫಾರ್ಮಸ್ಯುಟಿಕಲ್ ಕಂಪನಿಯಲ್ಲಿ ಕನಿಷ್ಠ ಒಂದು ವರ್ಷ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು. ಗರಿಷ್ಠ ವಯೋಮಿತಿ 26 ವರ್ಷ (ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ). ಆಸಕ್ತರು ಅರ್ಜಿಯನ್ನು ಸಂಸ್ಥೆಯ ವೆಬ್ ಸೆಟ್ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ದಿನದಂದು ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 24, 2016. ಸ್ಥಳ: ಕೆಎಪಿಎಲ್, ನಿರ್ಮಾಣ್ ಭವನ್, ಡಾ. ರಾಜ್ಕುಮಾರ್ ರೋಡ್, ಫಸ್ಟ್ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010.
ಸಮಯ: ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30 ಗಂಟೆ.
ದೂರವಾಣಿ ಸಂಖ್ಯೆ: 080 2357 1590